ನವದೆಹಲಿ: ಎಎಪಿ ಮತ್ತು ಬಿಜೆಪಿ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ.
ದೆಹಲಿ ಮುನ್ಸಿಪಲ್ ಕಾರ್ಪೋರೇಶನ್’ನ (ಎಂಸಿಡಿ) ಚೊಚ್ಚಲ ಸಭೆ ಇಂದು ಆಯೋಜಿಸಲಾಗಿತ್ತು. ಇದರಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಬಿಜೆಪಿ ಮತ್ತು ಎಎಪಿ ನಡುವೆ ಘರ್ಷಣೆ ಏರ್ಪಟ್ಟ ಹಿನ್ನೆಲೆಯಲ್ಲಿ ಎಂಸಿಡಿ ಸದನ ಸಭೆಯನ್ನು ಮುಂದೂಡಲಾಗಿದೆ.
ಶರ್ಮಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಆರಂಭಿಸಿದಾಗ ಎಎಪಿ ಕೌನ್ಸಿಲರ್’ಗಳು ಮತ್ತು ಶಾಸಕರು ಅವರ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಮೊದಲು ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲು ಪಟ್ಟು ಹಿಡಿದರು. ಹೀಗಾಗಿ ಎಎಪಿ ಮತ್ತು ಬಿಜೆಪಿ ಸದಸ್ಯರ ನಡುವೆ ಘರ್ಷಣೆ ನಡೆಯಿತು. ಇನ್ನು ಘರ್ಷಣೆ ಹಿನ್ನೆಲೆ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೇಯರ್ ಚುನಾವಣಾ ಪ್ರಕ್ರಿಯೆ ಮೇಲ್ವಿಚಾರಣೆ ವಹಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ತಿಳಿಸಿದ್ದಾರೆ.