ಅಕ್ರಮ ಹಣ ವರ್ಗಾವಣೆ | ದೆಹಲಿ ಸಚಿವ ಸತ್ಯೇಂದ್ರ ಜೈನ್ ಬಂಧನ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಡಿ ಇಲಾಖೆಯ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

- Advertisement -

ಅರವಿಂದ್ ಕೇಜ್ರಿವಾಲ್ ಸರ್ಕಾರದ ಪ್ರಬಲ ನಾಯಕರಾಗಿದ್ದ ಸತ್ಯೇಂದ್ರ ಜೈನ್ 2015-16ರಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಅವರ ಕುಟುಂಬ ಒಡೆತನದ ರೂ. 4.81 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ ಸುಮಾರು ಎರಡು ತಿಂಗಳ ನಂತರ ಅಧಿಕಾರಿಗಳು ಸತ್ಯೇಂದ್ರ ಅವರನ್ನು ಇಂದು ಬಂಧಿಸಿದ್ದಾರೆ.



Join Whatsapp