Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್’ಗೆ ಮತ್ತೆ ಜಾಮೀನು ನಿರಾಕರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್’ಗೆ ಮತ್ತೆ ಜಾಮೀನು ನಿರಾಕರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕರಿಸಿದೆ.

2015 – 16ರ ಸಾಲಿನಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವಹಿವಾಟಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಕಳೆದ ತಿಂಗಳು ಬಂಧಿಸಿತ್ತು.

ಈ ಮಧ್ಯೆ ಕೇಂದ್ರೀಯ ತನಿಖಾ ದಳ (ಸಿಬಿಐ) ಜೈನ್ ಮತ್ತು ಕುಟುಂಬದ ವಿರುದ್ಧ ಆಗಸ್ಟ್ 2017 ರಲ್ಲಿ 1.62 ಕೋಟಿ ರೂ. ವರೆಗಿನ ಅಕ್ರಮ ಹಣ ವರ್ಗಾವಣೆ ಆರೋಪದ ಆಧಾರದಲ್ಲಿ ಪ್ರಕರಣ ದಾಖಲಿಸಿತ್ತು.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು.

Join Whatsapp
Exit mobile version