►15 ವರ್ಷದ ಬಿಜೆಪಿ ಆಡಳಿತ ಅಂತ್ಯ
ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ 104 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಪಡೆದು ತೃಪ್ತಿಪಟ್ಟುಕೊಂಡಿದೆ.
ಡಿಸೆಂಬರ್ 4 ರಂದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 2017 ರಲ್ಲಿ (ಅಂದಿನ) 270 ಮುನ್ಸಿಪಲ್ ವಾರ್ಡ್ ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ AAP ಕೇವಲ 48 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು.