Home ಟಾಪ್ ಸುದ್ದಿಗಳು ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆ: ಆಪ್ ಭರ್ಜರಿ ಗೆಲುವು

ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆ: ಆಪ್ ಭರ್ಜರಿ ಗೆಲುವು

►15 ವರ್ಷದ ಬಿಜೆಪಿ ಆಡಳಿತ ಅಂತ್ಯ

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ.


ಬಿಜೆಪಿ 104 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಪಡೆದು ತೃಪ್ತಿಪಟ್ಟುಕೊಂಡಿದೆ.


ಡಿಸೆಂಬರ್ 4 ರಂದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 2017 ರಲ್ಲಿ (ಅಂದಿನ) 270 ಮುನ್ಸಿಪಲ್ ವಾರ್ಡ್ ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ AAP ಕೇವಲ 48 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು.

Join Whatsapp
Exit mobile version