ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆಲುವು ದಾಖಲಿಸಿದ ಮಂಗಳಮುಖಿ

Prasthutha|

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ.

- Advertisement -

ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, ಎಮ್’ಸಿಡಿ ಚುನಾವಣೆಯಲ್ಲಿ ಮಂಗಳಮುಖಿ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ.

ಬೋಬಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ ಅವರನ್ನು 6,714 ಮತಗಳ ಅಂತರದಿಂದ ಸೋಲಿಸಿದ್ದಾರೆ.

- Advertisement -

ಬುಧವಾರ ಪ್ರಕಟವಾಗುತ್ತಿರುವ ಪಾಲಿಕೆ ಚುನಾವಣೆಯ ಫಲಿತಾಂಶದಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ 250 ವಾರ್ಡ್‌ಗಳ ಮತಗಳ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷವು 125ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

149 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು. ಈ ಪೈಕಿ ಎಎಪಿ 82, ಬಿಜೆಪಿ 62, ಕಾಂಗ್ರೆಸ್ 4, ಮತ್ತು ಒಂದು ಸ್ವತಂತ್ರ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ.



Join Whatsapp