ಮೈಸೂರು: ಸಂಸತ್ತಿನಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಮೈಸೂರಿನ ಮನೋರಂಜನ್ ಮನೆಗೆ ದೆಹಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೆಹಲಿಯ ಮಹಿಳಾ ಪೊಲೀಸ್ ಸೇರಿದಂತೆ ಮೂರು ಜನರ ತಂಡ ಇಂದು ಬೆಳ್ಳಂಬೆಳಗ್ಗೆ ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿರುವ ಮನೋರಂಜನ್ ಮನೆಗೆ ಆಗಮಿಸಿದೆ. ಬಳಿಕ ಮನೋರಂಜನ್ ತಂದೆ, ತಾಯಿ ಶೈಲಜಾ ಹಾಗೂ ವಿವಾಹಿತ ತಂಗಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಇದರ ಜೊತೆಗೆ ಮನೋರಂಜನ್ ಕೊಠಡಿಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ವಸ್ತುಗಳನ್ನು ವೀಕ್ಷಣೆ ಮಾಡಿದ್ದಾರೆ. ಮನೋರಂಜನ್ ಮನೆಯ ಬಳಿ ವಿಜಯನಗರ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.