ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ಅಧಿಕಾರಿಗಳು ನಡೆಸಿದ ವಿಚಾರಣೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆಯನ್ನು ನಡೆಸಿತ್ತು. ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಕಾಂಗ್ರೆಸ್ ಸಂಸದರನ್ನು ಅಮಾನುಷವಾಗಿ ಎಳೆದಾಡಿದ್ದರು. ಈ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಸಂಸದೀಯ ಸಭೆ ನಡೆಸಲು ಕರೆ ನೀಡಿರುವುದಾಗಿ ಎಎನ್’ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದೆಹಲಿ ಪೊಲೀಸರು ಸಹ ಸಂಸದರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಂಸದರು ಇಂದು ಕಾಂಗ್ರೆಸ್ ಸಂಸದೀಯ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೇತೃತ್ವದ ನಿಯೋಗವು ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಚರ್ಚಿಸಲಿದೆ ಎಂದು ವರದಿಯಾಗಿದೆ