ದೆಹಲಿ ಮಾಲಿನ್ಯ: ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ; ಕಟ್ಟಡ ಕಾರ್ಮಿಕರಿಗೆ 5000 ರೂ. ನೆರವು ಘೋಷಿಸಿದ ಕೇಜ್ರಿವಾಲ್

Prasthutha|

ನವದೆಹಲಿ: ಕಟ್ಟಡ ನಿರ್ಮಾಣ ಚಟುವಟಿಕೆಗಳಿಂದ ತೊಂದರೆಗೀಡಾದ ಪ್ರತಿಯೊಬ್ಬ ಕಟ್ಟಡ ಕಾರ್ಮಿಕನಿಗೆ ಮಾಸಿಕ ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ನಿರ್ದೇಶನ ನೀಡಿದ್ದಾರೆ.

- Advertisement -

“ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಾದ್ಯಂತ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದ ಈ ಅವಧಿಯಲ್ಲಿ ಪ್ರತಿ ನಿರ್ಮಾಣ ಕಾರ್ಮಿಕರಿಗೆ 5000 ರೂ.ಗಳ ಆರ್ಥಿಕ ಬೆಂಬಲವನ್ನು ನೀಡುವಂತೆ ನಾನು ಕಾರ್ಮಿಕ ಸಚಿವ ಶ್ರೀ ಮನೀಶ್ ಸಿಸೋಡಿಯಾ ಅವರಿಗೆ ನಿರ್ದೇಶನ ನೀಡಿದ್ದೇನೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬುಧವಾರ ಟ್ವೀಟ್ ಮಾಡಿದ್ದಾರೆ.

ಮಾಲಿನ್ಯದ ಮಟ್ಟವು ಹದಗೆಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರದ ವಾಯು ಗುಣಮಟ್ಟದ ಸಮಿತಿಯು, ದೆಹಲಿ-ಎನ್.ಸಿ.ಆರ್. ನಲ್ಲಿ ಅಗತ್ಯ ಯೋಜನೆಗಳು ಮತ್ತು GRAP III ಅಡಿಯ ಕೆಲವನ್ನು ಹೊರತುಪಡಿಸಿ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲೆ ನಿಷೇಧ ಹೇರುವಂತೆ ಶನಿವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

- Advertisement -

ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ.

Join Whatsapp