ನವದೆಹಲಿ: 2020ರ ಫೆಬ್ರವರಿಯಲ್ಲಿ ನಡೆದ ಗಲಭೆಗೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರು ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಣೆ ಮಾಡಿದೆ
ಎರಡು ವರ್ಷಗಳಿಂದ ಬಂಧಿತರಾಗಿರುವ ಉಮರ್ ಖಾಲಿದ್ ಅರ್ಜಿಯ ಆದೇಶವನ್ನು ಸೆಪ್ಟೆಂಬರ್ 9 ರಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಟ್ನಾಗರ್ ಅವರ ಪೀಠವು ಕಾಯ್ದಿರಿಸಿದ್ದು, ಇಂದು ಜಾಮೀನು ಅರ್ಜಿಯ ತೀರ್ಪು ನೀಡಿದೆ.
ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದಲ್ಲಿ ತನಗೆ “ಕ್ರಿಮಿನಲ್ ಪಾತ್ರ” ಇಲ್ಲ ಅಥವಾ ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ “ಪಿತೂರಿಯ ಸಂಪರ್ಕ” ಇಲ್ಲ ಎಂದು ಖಾಲಿದ್ ವಾದಿಸಿದ್ದರೂ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಣೆ ಮಾಡಿ ಆದೇಶ ಹೊರಡಿಸಿದೆ.