ದೆಹಲಿ ಗಲಭೆ ಸಂಚು ಆರೋಪ: JNU ಮಾಜಿ ವಿದ್ಯಾರ್ಥಿ ಮುಖಂಡ ಶರ್ಜೀಲ್ ಇಮಾಮ್‌ಗೆ ಮತ್ತೆ ಜಾಮೀನು ನಿರಾಕರಣೆ

Prasthutha|

ನವದೆಹಲಿ: 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಪಿತೂರಿಯ ಆರೋಪದಲ್ಲಿ UAPA ಕಾಯ್ದೆ ಅಡಿಯಲ್ಲಿ ಬಂಧಿತ JNU ಮಾಜಿ ವಿದ್ಯಾರ್ಥಿ ಮುಖಂಡ ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

- Advertisement -

ಸರ್ಕಾರ ಜಾರಿಗೊಳಿಸಲು ಮುಂದಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು NRC ವಿರುದ್ಧ 2019ರ ಡಿಸೆಂಬರ್ ನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಶರ್ಜೀಲ್ ಅವರ ಮೇಲೆ ಸರ್ಕಾರದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಹೊರಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧಿತ ಶರ್ಜೀಲ್ ಇಮಾಮ್ ಅವರಿಗೆ ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಮತ್ತೆ ಜಾಮೀನು ನಿರಾಕರಿಸಿದ್ದಾರೆ.

ಆರೋಪಿ ಶರ್ಜೀಲ್ ಇಮಾಮ್ ಅವರನ್ನು ವಿವಿಧ ಐಪಿಸಿ ಮತ್ತು UAPA ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗಿತ್ತು.

- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ವಿರೋಧಿಗಳ ನಡುವೆ ಏರ್ಪಟ್ಟ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಘರ್ಷಣೆ ಭುಗಿಲೆದ್ದಿತ್ತು.

Join Whatsapp