ದೆಹಲಿ ಗಲಭೆಯಲ್ಲಿ ಮುಸ್ಲಿಮರ ಹತ್ಯೆ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್
Prasthutha: December 14, 2021

ನವದೆಹಲಿ: ಈಶಾನ್ಯ ದೆಹಲಿ ಗಲಭೆಯಲ್ಲಿ ನಾಲ್ವರು ಮುಸ್ಲಿಮರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಜಯ್, ಶುಭಂ ಎಂಬವರಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಕಳೆದ ವರ್ಷ ಏಪ್ರಿಲ್ ನಿಂದ ಜೈಲಿನಲ್ಲಿರುವ ಆರೋಪಿಗಳಿಗೆ ಸಾರ್ವಜನಿಕರಿಗೆ ಬೆದರಿಕೆವೊಡ್ಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಾಮೀನು ನೀಡಿಲ್ಲ ಎಂದು ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್ ತಿಳಿಸಿದರು.
ದಯಾಳ್ ಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 147, 148, 149, 302, 120 ಬಿ, 34 ರ ಅಡಿಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು.
ಮತ್ತೊಂದೆಡೆ ಅಶ್ಫಾಕ್ ಹುಸೇನ್ ಎಂಬಾತನ ಕೊಲೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಶುಭಂ ಜಾಮೀನು ಅರ್ಜಿ ಸಲ್ಲಿಸಿದ್ದರು.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News
