ದೆಹಲಿ: ಯುವತಿಯ ತುಂಡು-ತುಂಡಾದ ದೇಹ ಪತ್ತೆ

Prasthutha|

ನವದೆಹಲಿ: ಗೀತಾ ಕಾಲೋನಿಯ ಫ್ಲೈಓವರ್ ಬಳಿ ಯುವತಿಯ ತುಂಡು-ತುಂಡಾದ ದೇಹ ಪತ್ತೆಯಾಗಿದೆ.

- Advertisement -


ದೆಹಲಿ ಪೊಲೀಸರು ಇಂದು ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ಪತ್ತೆ ಮಾಡಿದ್ದು, ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಹಾಕಲಾಗಿದೆ. ಪ್ರಸ್ತುತ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.