ದೆಹಲಿಯ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ‌

Prasthutha|

ಸೋಂಕಿತನಿಗೆ ಯಾವುದೇ ವಿದೇಶ ಯಾತ್ರೆಯ ಇತಿಹಾಸವಿಲ್ಲ

- Advertisement -

ನವದೆಹಲಿ: ದೆಹಲಿಯ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಯಾವುದೇ ವಿದೇಶಿ ಪ್ರಯಾಣದ ಇತಿಹಾಸವಿಲ್ಲದ 31 ವರ್ಷದ ವ್ಯಕ್ತಿಗೆ ರೋಗ ಇರುವುದು ಪತ್ತೆಯಾಗಿದೆ. ಇದು ಭಾರತದಲ್ಲಿ ವರದಿಯಾದ ನಾಲ್ಕನೇ ಮಂಕಿಪಾಕ್ಸ್ ಪ್ರಕರಣವಾಗಿದ್ದು, ಹಿಂದಿನ ಮೂರು ಪ್ರಕರಣಗಳು ಕೇರಳದಿಂದ ವರದಿಯಾಗಿವೆ.

ಪಶ್ಚಿಮ ದೆಹಲಿ ನಿವಾಸಿಯಾಗಿರುವ ಈ 31 ವರ್ಷದ ವ್ಯಕ್ತಿಗೆಗ ಮೂರು ದಿನಗಳ ಹಿಂದೆ ಜ್ವರ ಮತ್ತು ಚರ್ಮದಲ್ಲಿ ದದ್ದುಗಳು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಮಾದರಿಗಳನ್ನು ನಿನ್ನೆ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದ್ದು, ಇಂದು ವರದಿ ಬಂದಾಗ ಮಂಕಿಪಾಕ್ಸ್ ಇರುವುದು ಪತ್ತೆಯಾಗಿದೆ.

- Advertisement -

ಈ ವ್ಯಕ್ತಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಮಂಕಿಪಾಕ್ಸ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

Join Whatsapp