ಕುರ್‌ಆನ್ ಸೂಕ್ತಗಳ ತಿದ್ದುಪಡಿಗೆ ಬೇಡಿಕೆ | ವಾಸಿಮ್ ರಿಝ್ವಿ ವಿರುದ್ಧ ಕೇಸು ದಾಖಲು

Prasthutha|

ಬರೇಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಕುರ್‌ಆನ್‌ನಲ್ಲಿನ 26 ಸೂಕ್ತಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಮ್ ರಿಝ್ವಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲಾಗಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅಂಜುಮಾನ್ ಕೊತ್ವಾಲಿ ಖುದ್ದಮ್ ಇ ರಸೂಲ್ ಕಾರ್ಯದರ್ಶಿ ಶಾನ್ ಅಹ್ಮದ್ ಮತ್ತು ಇತ್ತಿಹಾದೇ ಮಿಲ್ಲತ್ ಕೌನ್ಸಿಲ್ ನ ದೂರಿನ ಮೇರೆಗೆ ಬರೇಲಿಯ ಕೊತ್ವಾಲಿ ಪೊಲೀಸರು ಈ ಪ್ರಕರಣವನ್ನು ದಾಖಲಿಸಿದ್ದಾರೆ.

ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಯನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಲು ಪ್ರಯತ್ನಿಸಿದ್ದಕ್ಕಾಗಿ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ಉತ್ತೇಜಿಸುವ ಕುರ್‌ಆನ್‌ನಲ್ಲಿನ ಕೆಲವು ಸೂಕ್ತಗಳನ್ನು ತೆಗೆದುಹಾಕಬೇಕೆಂದು ಕೋರಿ ರಿಝ್ವಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Join Whatsapp