ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

- Advertisement -

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ. ಬುದ್ಧ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತವಾಗಿದೆ ಎಂದು ಸಿಎಂ ಹೇಳಿದರು.

1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣ ಅತ್ಯಂತ ಅರ್ಥಪೂರ್ಣವಾಗಿದೆ. ನಾವೀಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಜನರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ನೀಡಿದರೆ ಸಾಲದು, ಅದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ನೀಡಬೇಕು. ಇಲ್ಲದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆ ಅವರು ನೀಡಿದ್ದರು. ಹೀಗಾಗಿ ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯವು ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ ಎಂದು ಸಿಎಂ ಹೇಳಿದರು.



Join Whatsapp