ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ. ಆದರೆ ಮಸೀದಿ ಕೆಡವಿ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಸ್ಟಾಲಿನ್, ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕರುಣಾನಿಧಿ ಅವರು ಯಾವಾಗಲೂ ಹೇಳುತ್ತಿದ್ದರು ಎಂದು ಹೇಳಿದ್ದಾರೆ.
ಮಂದಿರ ಕಟ್ಟುವುದು ಸಮಸ್ಯೆಯಲ್ಲ, ಆದರೆ ಮಸೀದಿ ಕೆಡವಿ ಅಲ್ಲಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ, ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಸ್ಟಾಲಿನ್ ಹೇಳಿದರು.