Home ಕರಾವಳಿ ಡೆಂಗ್ಯೂ ಆತಂಕ: ಉಡುಪಿಯ ಕೆಲವು ಶಾಲೆಗಳಿಗೆ 10 ದಿನ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಡೆಂಗ್ಯೂ ಆತಂಕ: ಉಡುಪಿಯ ಕೆಲವು ಶಾಲೆಗಳಿಗೆ 10 ದಿನ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಭೀತಿ ಹೆಚ್ಚುತ್ತಿದೆ . ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಗ್ರಾಮಾಂತರ ಭಾಗದ ಶಾಲೆಗಳಿಗೆ ರಜೆ ನೀಡಲಾಗಿದೆ.

ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಡ್ಕಲ್ ಮದ್ದೂರು ಭಾಗದ ಶಾಲೆಗಳಿಗೆ ರಜೆ ಆದೇಶ ಜಾರಿಯಾಗಲಿದೆ. ಉಡುಪಿ ಜಿಲ್ಲೆ ಯಲ್ಲಿ 152 ಡೆಂಗ್ಯೂ ಪ್ರಕರಣ ಖಚಿತಗೊಂಡಿದೆ.ಈ ವರೆಗೆ 2000ಕ್ಕೂ ಅಧಿಕ ಶಂಕಿತ ಪ್ರಕರಣಗಳು ಪತ್ತೆಯಾಗಿದ್ದು ಪರೀಕ್ಷೆಗೆ ಒಳಪಡಿಸಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಡೆಂಗ್ಯೂ ರೋಗ ಮಿತಿಮೀರಿದೆ. ಬೈಂದೂರು ತಾಲೂಕಿನ ಜಡ್ಕಲ್‌ ಗ್ರಾ.ಪಂ. ವ್ಯಾಪ್ತಿಯ ಮುದೂರು, ಉದಯನಗರ, ಬೀಸಿನಪಾರೆ, ಕಾನ್ಕಿ ಮುಂತಾದೆಡೆ ಡೆಂಗ್ಯೂ ಕಾಣಿಸಿಕೊಂಡಿದೆ.

Join Whatsapp
Exit mobile version