ರಾಹುಲ್ ಗಾಂಧಿ ಇದ್ದ ವಿಮಾನ ಇಳಿಯಲು ಅನುಮತಿ ನಿರಾಕರಣೆ

Prasthutha|

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿಮಾನಕ್ಕೆ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -

“ಕೊನೆಯ ಕ್ಷಣದಲ್ಲಿ” ತಮ್ಮ ವಿಮಾನವನ್ನು ಇಳಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿಗೆ ಮರಳಿದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರೈ ಆರೋಪಿಸಿದ್ದಾರೆ.

ಸೋಮವಾರ ತಡರಾತ್ರಿ ರಾಹುಲ್ ಗಾಂಧಿ ಅವರ ವಿಮಾನವನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ವಿಮಾನ ನಿಲ್ದಾಣದ ಅಧಿಕಾರಿಗಳು ಆರೋಪವನ್ನು ನಿರಾಕರಿಸಿದ್ದಾರೆ.

- Advertisement -

ಕೇರಳದ ವಯನಾಡಿನಿಂದ ವಾಪಸಾಗುವಾಗ ಇಲ್ಲಿನ ಬಾಬತ್ ವಿಮಾನ ನಿಲ್ದಾಣದಲ್ಲಿ ಗಾಂಧಿಯವರ ವಿಮಾನ ಇಳಿಯಬೇಕಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರೈ ಮಂಗಳವಾರ ಹೇಳಿದ್ದರು.

ಅವರು ಮತ್ತು ಪಕ್ಷದ ಇತರ ನಾಯಕರು ರಾಹುಲ್ ಗಾಂಧಿಯವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದರು, ಆದರೆ “ಕೊನೆಯ ಗಳಿಗೆಯಲ್ಲಿ” ಅವರ ವಿಮಾನವನ್ನು ಇಳಿಯಲು ಅನುಮತಿಸಲಿಲ್ಲ ಎಂದು ಅಜಯ್ ರೈ ಹೇಳಿದರು. ನಂತರ ಗಾಂಧಿ ರಾಷ್ಟ್ರ ರಾಜಧಾನಿಗೆ ಮರಳಿದರು.

‘ಆದರೆ, ಗಾಂಧಿ ಆಗಮನದ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲ’ ಎಂದು ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ತಿಳಿಸಿದ್ದಾರೆ.

ಗಾಂಧಿಯವರ ವಿಮಾನವನ್ನು ಇಳಿಸಲು ಅನುಮತಿ ನಿರಾಕರಿಸಿದ್ದಾರೆ ಎಂಬ ಆರೋಪವನ್ನು ನಿರ್ದೇಶಕರು ನಿರಾಕರಿಸಿದರು. ಏರ್ ಟ್ರಾಫಿಕ್ ಕಂಟ್ರೋಲರ್’ಗೆ ವಿಮಾನ ನಿಲ್ದಾಣದಲ್ಲಿ ಇಳಿಯುವ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಯಿತು ಎಂದು ಸನ್ಯಾಲ್ ಹೇಳಿದರು. ಮಂಗಳವಾರ ಕಮಲಾ ನೆಹರು ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಪ್ರಯಾಗ್’ರಾಜ್’ಗೆ ಭೇಟಿ ನೀಡಲಿದ್ದಾರೆ ಎಂದು ಅಜಯ್ ರೈ ಹೇಳಿದರು.

Join Whatsapp