ಪಂಜಾಬ್ ಚುನಾವಣೆ: ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ ಮುಖ್ಯಮಂತ್ರಿ ಸಹೋದರ

Prasthutha|

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಸಹೋದರ ಮನೋಹರ್ ಸಿಂಗ್ ಟಕೆಟ್ ವಂಚಿತರಾಗಿದ್ದು, ಸ್ವತಂತ್ರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ನಿರ್ಧರಿಸಿದ್ದಾರೆ.

- Advertisement -


ಬಸ್ಸಿ ಪಠಾಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


86 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, ಬಸ್ಸಿ ಪಠಾಣ ಕ್ಷೇತ್ರದಿಂದ ಪಕ್ಷದ ಶಾಸಕ ಗುರುಪ್ರೀತ್ ಸಿಂಗ್ ಗೆ ಟಿಕೆಟ್ ನೀಡಿದೆ.

- Advertisement -

ಗುರ್‌ಪ್ರೀತ್‌ ಸಿಂಗ್‌ ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವ ನಿರ್ಧಾರವನ್ನು ಕ್ಷೇತ್ರದ ಜನತೆಗೆ ಮಾಡಿದ ಅನ್ಯಾಯ ಎಂದು ಕರೆದಿರುವ ಮನೋಹರ್‌ ಸಿಂಗ್‌, ಹಾಲಿ ಶಾಸಕರು ಅಸಮರ್ಥರು ಮತ್ತು ನಿಷ್ಪ್ರಯೋಜಕರು ಎಂದು ಆರೋಪಿಸಿದ್ದಾರೆ.

ಬಸ್ಸಿ ಪಠಾಣ ಪ್ರದೇಶದ ಹಲವಾರು ಮುಖಂಡರು ಸ್ವತಂತ್ರವಾಗಿ ಸ್ಪರ್ಧಿಸುವಂತೆ ನನ್ನನ್ನು ಕೇಳಿದ್ದಾರೆ. ಅವರು ಹೇಳಿದಂತೆ ನಾನು ಹೋಗುತ್ತೇನೆ. ಹಿಂದೆ ಸರಿಯುವ ಮಾತೇ ಇಲ್ಲ. ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಮನೋಹರ್ ಸಿಂಗ್ ತಿಳಿಸಿದ್ದಾರೆ.


ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

Join Whatsapp