ಟಿಕೆಟ್ ನಿರಾಕರಣೆ । ಬಿಜೆಪಿ ತ್ಯಜಿಸಿದ ಮಾಜಿ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್

Prasthutha|

ಪಣಜಿ: ಮುಂದಿನ ತಿಂಗಳು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಕಾರಣ ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ ಲಕ್ಷ್ಮೀಕಾಂತ್ ಪರ್ಸೇಕರ್ ಶನಿವಾರ ಆಡಳಿತರೂಢ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಲಕ್ಷ್ಮೀಕಾಂತ್ ಪರ್ಸೇಕರ್, ಇನ್ನು ಮುಂದಕ್ಕೆ ಪಕ್ಷದಲ್ಲಿ ಉಳಿಯಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಸ್ತುತ ಲಕ್ಷ್ಮೀಕಾಂತ್ ಪರ್ಸೇಕರ್ ಮುಂಬರುವ ಗೋವಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರು ಮತ್ತು ಪಕ್ಷದ ಕೋರ್ ಕಮಿಟಿಯ ಸದಸ್ಯರೂ ಆಗಿದ್ದಾರೆ.

- Advertisement -

2002 – 2017 ರ ನಡುವೆ ಪರ್ಸೇಕರ್ ಪ್ರನಿನಿಧಿಸಿದ ಮಾಂಡ್ರೆಮ್ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ದಯಾನಂದ್ ಸೋಪ್ಟೆ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ.

2017 ರ ಗೋವಾ ಚುನಾವಣೆಯಲ್ಲಿ ಸೋಪ್ಟೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪರ್ಸೇಕರ್ ಅವರನ್ನು ಸೋಲಿಸಿದ್ದರು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ 2019 ರಲ್ಲಿ ಒಂಬತ್ತು ಇತರ ನಾಯಕರೊಂದಿಗೆ ಪರ್ಸೇಕರ್ ಅವರು ಆಡಳಿತರೂಢ ಬಿಜೆಪಿ ಸೇರ್ಪಡೆಯಾಗಿದ್ದರು.

ಅಂದಿನ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವರಾಗಿ ಕೇಂದ್ರ ಸಂಪುಟ ಸೇರ್ಪಡೆಗೊಂಡ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಪರ್ಸೇಕರ್ ಅವರು ಆಯ್ದೆಯಾಗಿದ್ದರು.

ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಬಹುತೇಕ ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.

ಸದ್ಯ ಗೋವಾದಲ್ಲಿ ಒಟ್ಟು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Join Whatsapp