ನಬರಂಗಪುರ(ಒಡಿಶಾ): ದಟ್ಟ ಮಂಜಿನಿಂದ ಸರಿಯಾಗಿ ರಸ್ತೆ ಕಾಣದೇ ವೇಗವಾಗಿ ಹೋಗುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ
ಜಿಲ್ಲೆಯ ದಾಬುಗಾಂವ್ ಪೊಲೀಸ್ ವ್ಯಾಪ್ತಿಯ ಸರಗುಡದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಎಂಡಿ ಸದ್ದಾಂ, ರಬಿನ್ ಹಿಲಾ ಮತ್ತು ಸಬನ್ ಹಿಲಾಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಎಂಡಿ ಅನ್ಸಾರ್ ಕೋರಾಪುಟ್’ನ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಮರ್’ಕೋಟೆಯಿಂದ ನಬರಂಗಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ದಟ್ಟ ಮಂಜಿನಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದರು. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಅನುಸರಿಸಿದ್ದಾರೆ.