ದಂತವೈದ್ಯ ಕೃಷ್ಣಮೂರ್ತಿ ನಿಗೂಢ ಸಾವು| ತನಿಖೆಗೆ ವಿಶೇಷ ತಂಡ ರಚನೆ

Prasthutha|

ಕುಂದಾಪುರ: ದಂತ ವೈದ್ಯ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ನಿಗೂಢ ಸಾವಿನ ತನಿಖೆಗೆ ಕುಂದಾಪುರ ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ಪ್ರತ್ಯೇಕ ತನಿಖಾ ತಂಡವನ್ನು ರಚಿಸಲಾಗಿದೆ.

- Advertisement -

 ಡಿವೈಎಸ್‌ಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಹಾಕೆ, ಸಿಪಿಐ ಗೋಪಿಕೃಷ್ಣ ನೇತೃತ್ವದಲ್ಲಿ ಮೂವರು ಎಸ್‌ಐಗಳು ಇರುವ ಪೊಲೀಸರ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದೆ. ಒಂದು ತಂಡ ಕಾಸರಗೋಡಿಗೆ ತೆರಳಿದೆ. ಕಾಸರಗೋಡು ಪೊಲೀಸರ ಜತೆ ಸಮನ್ವಯ ಸಾಧಿಸಿದ್ದೇವೆ. ಘಟನಾ ಸ್ಥಳಕ್ಕೆ ಎರಡನೆ ಬಾರಿ ಭೇಟಿ ನೀಡಿ ಪರಿಶೀಲಿಸಿದ್ದಾಗಿದೆ. ನುರಿತ ತಾಂತ್ರಿಕ ಸಿಬಂದಿ ತಂಡದಲ್ಲಿದ್ದು ಫೊರೆನ್ಸಿಕ್‌ ವೈದ್ಯರ ಅಭಿಪ್ರಾಯವನ್ನೂ ಪಡೆಯಲಿದ್ದೇವೆ ಎಂದರು.

ಕಾಸರಗೋಡು ಜಿಲ್ಲೆಯ ಬದಿಯಡ್ಕ ಮೂಲದ ಹಿರಿಯ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ಛಿದ್ರಗೊಂಡ ಮೃತದೇಹ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಹಟ್ಟಿಯಂಗಡಿ ಗ್ರಾಮದ ಕಾಡು ಅಜ್ಜಿಮನೆಯಲ್ಲಿಯ ರೈಲು ಹಳಿ ಪ್ರದೇಶದಲ್ಲಿ ಪತ್ತೆಯಾಗಿತ್ತು.

Join Whatsapp