ನಾಲ್ಕನೇ ಮಹಡಿಯಿಂದ ಮಗಳನ್ನು ಕೆಳಕ್ಕೆಸೆದು ಕೊಲೆಗೈದ ದಂತ ವೈದ್ಯೆ: ಕೃತ್ಯದ ಬಳಿಕ ಆತ್ಮಹತ್ಯೆ ಯತ್ನ

Prasthutha|

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ತಾಯಿಯೊಬ್ಬಳು ತನ್ನ ನಾಲ್ಕು ವರ್ಷದ ಪುತ್ರಿಯನ್ನೇ ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಂಪಂಗಿರಾಮನಗರದಲ್ಲಿ ನಡೆದಿದೆ.

- Advertisement -

ಸಂಪಂಗಿರಾಮನಗರದ ಅದಿತ್ವ ಅಪಾರ್ಟ್ಮೆಂಟ್ ನ ಫ್ಲಾಟ್ ವೊಂದರಲ್ಲಿ ವಾಸಿಸುತ್ತಿದ್ದ ತಾಯಿಯಿಂದ ಕೊಲೆಯಾದ ಮಗುವನ್ನು ಜೀತಿ(4) ಎಂದು ಗುರುತಿಸಲಾಗಿದ್ದು, ಕೃತ್ಯ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಲಾಗಿದೆ.

ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಯಿಯ ಅಮಾನವೀಯ ಕೃತ್ಯ ಎಂತಹವರ ಮನಕಲುಕುವಂತಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಬುದ್ಧಿಮಾಂದ್ಯತೆಯ ಕಾರಣದಿಂದಾಗಿ ಮಗಳು ಜೀತಿಯನ್ನು ಸಾಕಲಾಗದೇ ತಾಯಿ ಇಂತಹ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್ ನಲ್ಲಿ ತಾಯಿಯು ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಇದೀಗ ಮಗುವನ್ನು ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ.

ಮಹಿಳೆಯನ್ನು ಹತ್ಯೆ ಮಾಡಿದ ಮಹಿಳೆ ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಳು. ಮೃತ ಮಗುವಿನ ತಂದೆ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದಾರೆ.

ತಾಯಿ ವಿರುದ್ದ ಸಂಪಂಗಿರಾಮನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

https://twitter.com/KeypadGuerilla/status/1555474553723580417
Join Whatsapp