ಕೊಡಗು: ವಿಷ ಕುಡಿದು KSRTC ನೌಕರ ಅಭಿಷೇಕ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಕೆಎಸ್ಆರ್ಟಿಸಿ ಡಿಪೋದಲ್ಲಿ ನಡೆದಿದೆ.
ಅಸ್ವಸ್ಥಗೊಂಡ ನೌಕರ ಅಭಿಷೇಕ್ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಪೋ ವ್ಯವಸ್ಥಾಪಕಿ ಗೀತಾ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕುರಿತು ಮಡಿಕೇರಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.