ವಾಯುಭಾರ ಕುಸಿತ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ

Prasthutha|

►ಮುಂದಿನ ಐದು ದಿನ ಮಳೆ ಸಾಧ್ಯತೆ

- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇಂದು ಬೆಳಗ್ಗೆಯಿಂದ ಹಲವೆಡೆ ತುಂತುರು ಮಳೆ ಆರಂಭವಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದೆ.

ನಗರ ಹೊರವಲಯದ ಉಳ್ಳಾಲ, ಕೊಣಾಜೆ, ಮುಡಿಪು, ಮಂಜನಾಡಿ ಸೇರಿದಂತೆ ಹಲವೆಡೆ ಇಂದು ಬೆಳಗ್ಗೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನಾದ್ಯಂತ ಮಳೆ ಸುರಿದಿದೆ. ಬಂಟ್ವಾಳ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದೆ.

- Advertisement -

ಮುಂದಿನ ಐದು ದಿನಗಳ ಕಾಲ ಮೋಡ ಮಿಶ್ರಿತ ಹವಾಮಾನ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದ ಹಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join Whatsapp