ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇನ್ನೆರೆಡು ದಿನದಲ್ಲಿ ಚಂಡಮಾರುತವಾಗಿ ಮಾರ್ಪಡು

Prasthutha|

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಶುಕ್ರವಾರ ವಾಯುಭಾರ ಕುಸಿತ ಉಂಟಾಗಿದ್ದು, ಅದು ಇನ್ನೆರೆಡು ದಿನದಲ್ಲಿ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

- Advertisement -

ಚಂಡಮಾರುತ ಆಂಧ್ರಪ್ರದೇಶದ ಮಚಲಿಪಟ್ಟಣಂ ಮತ್ತು ಚೆನ್ನೈ ನಡುವೆ ಡಿ.4ರ ಸಂಜೆಯ ವೇಳೆಗೆ ಕರಾವಳಿಯನ್ನು ದಾಟಲಿದೆ ಎಂದು ಐಎಂಡಿ ಅಂದಾಜಿಸಿದೆ. ಈ ಮಾರುತವು ಪಶ್ಚಿಮ ಹಾಗೂ ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದ್ದು, ಡಿಸೆಂಬರ್ 2ರ ವೇಳೆಗೆ ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟು, ಡಿಸೆಂಬರ್ 3ರ ವೇಳೆಗೆ ಚಂಡಮಾರುತವಾಗಿ ಬದಲಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Join Whatsapp