ಗಣರಾಜ್ಯೋತ್ಸವ ಆಚರಣೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Prasthutha|

ಮಡಿಕೇರಿ: ಇದೇ ಜನವರಿ 26 ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. 

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಕೋವಿಡ್-19 ಹಿನ್ನೆಲೆ, ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದು ಅವರು ತಿಳಿಸಿದರು.

ಉಳಿದಂತೆ ಕವಾಯತು ತಂಡಗಳ ಸಿದ್ಧತೆ ಮಾಡಿಕೊಳ್ಳುವುದು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು, ಕುಡಿಯುವ ನೀರು ಪೂರೈಸುವುದು ಮತ್ತಿತರ ಬಗ್ಗೆ ನಿರ್ದೇಶನ ನೀಡಿದರು.  ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕಳೆದ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ನಡಾವಳಿ ಬಗ್ಗೆ ಮಾಹಿತಿ ನೀಡಿದರು.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ  ಶೇಖರ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶಂಕರ್ ನಾರಾಯಣ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಪದ್ಮಜಾ, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಸೆಸ್ಕ್ ಎಇಇ ವಿನಯ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಇತರರು ಇದ್ದರು.

Join Whatsapp