ಮಂಗಳೂರು | ವೀಕೆಂಡ್ ಕರ್ಫ್ಯೂ ವೇಳೆ ಪೂರ್ವ ನಿಗದಿತ ಮದುವೆ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ

Prasthutha: January 5, 2022

ಬಸ್ ಸಂಚಾರಕ್ಕೆ ಅವಕಾಶ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

ಮಂಗಳೂರು: ಕೋವಿಡ್ ಓಮಿಕ್ರಾನ್ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ  ಜಿಲ್ಲೆಗೆ ಹೊಸ ಆದೇಶವನ್ನು ಹೊರಡಿಸಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5ರವರೆಗೆ ಜಾರಿಯಲ್ಲಿರುತ್ತವೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯ ಪ್ರಮುಖಾಂಶಗಳು

1.ವೀಕೆಂಡ್ ಕರ್ಫ್ಯೂ ಪೂರ್ವ ನಿಗದಿತ ಮದುವೆ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ. ಆದರೆ ಸರ್ಕಾರದ ಆದೇಶದಂತೆ ಇನ್ನೂರು ಜನರಿಗೆ ಮಾತ್ರ ಅವಕಾಶ.

2.ವಾರಾಂತ್ಯ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೆ ಅವಕಾಶ

3.ಅಗತ್ಯ ದಿನಬಳಕೆ ವಸ್ತುಗಳ ಅಂಗಡಿ ತೆರೆಯಲು ಅವಕಾಶ. ಅಗತ್ಯ ವಸ್ತಗಳನ್ನು ಸಾರ್ವಜನಿಕರು ತಮ್ಮ ಹತ್ತಿರದ ಮಳಿಗೆಯಲ್ಲಿ ಪಡೆಯಲು ಸೂಚನೆ.

4.ಅನಗತ್ಯ ಸಂಚಾರ ನಡೆಸದೆ ಸೋಂಕು ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ.

5.ವಾರಾಂತ್ಯ ಕರ್ಫ್ಯೂ ವೇಳೆ ಶಾಲಾ ಕಾಲೇಜು ರಜೆ ನೀಡಲು ಸೂಚನೆ.

6.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹಾಲ್ ಟಿಕೇಟ್ ನೊಂದಿಗೆ ಶಾಲೆಗೆ ಹೋಗಲು ಅವಕಾಶ.

7.ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲು ಸೂಚನೆ

8.ಅನಿವಾರ್ಯ ಪೂರ್ವ ನಿಗದಿತ ಕಾರ್ಯಕ್ರಮಗಳು ಸರ್ಕಾರದ ಆದೇಶದಂತೆ ನಡೆಸಲು ಅವಕಾಶ

ಜಿಲ್ಲೆಯ ವಾರಾಂತ್ಯ ಕರ್ಫ್ಯೂ ವೇಳೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!