ಕರಾವಳಿ ಜಿಲ್ಲೆಯಲ್ಲಿ ಕೊರೋನಾ 3ನೇ ಅಲೆಯ ಆತಂಕ: ಕೇರಳ ಗಡಿ ತಲಪಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

Prasthutha|

ಮಂಗಳೂರು:  ವಾರಾಂತ್ಯ ಕರ್ಫ್ಯೂ ಮತ್ತು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಕೇರಳ ಗಡಿಭಾಗವಾದ ತಲಪಾಡಿಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

- Advertisement -

ಈ ಸಂದರ್ಭ ಕೇರಳ ಕಡೆಯಿಂದ ಬರುವ ಎಲ್ಲ ವಾಹನಗಳ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗೆ ಆಗಮಿಸುವವರಿಗೆ ಆರ್‌ ಟಿಪಿಸಿಆರ್‌ ಕಡ್ಡಾಯವಾಗಿ ಇರಬೇಕು. ಪ್ರತಿದಿನ 24 ಗಂಟೆ ಗಳ ಕಾಲ ಅಧಿಕಾರಿಗಳು ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಪೊಲೀಸ್‌ ಇಲಾಖೆ ಸಹಿತ ಆರೋಗ್ಯ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಇದೀಗ ನೂರರ ಗಡಿ ತಲುಪಿದೆ. ಅದರಂತೆ ಇದೀಗ ಜಿಲ್ಲೆಯಲ್ಲಿಯೂ ಕೋವಿಡ್‌ ಮೂರನೇ ಅಲೆಯ ಆತಂಕ ಎದುರಾಗಿದೆ.

Join Whatsapp