ಜಿಲ್ಲಾಧಿಕಾರಿ ಕಾರು ಅಪಘಾತ: ಅಪಾಯದಿಂದ ಪಾರಾದ ಕುಟುಂಬ

Prasthutha|

ಧಾರವಾಡ: ಅಧಿಕಾರ ವಹಿಸಿಕೊಳ್ಳುವ ನಿಮಿತ್ತ ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರು ಅಪಘಾತಕ್ಕೊಳಗಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಬೆಳಗಿನ ಜಾವ 5.30 ರ ಹೊತ್ತಿಗೆ ನಡೆದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಹಾಗೂ ಅವರ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣ ಕುಮಾರ ಕಾರಿನಲ್ಲಿದ್ದವರು. ಎಲ್ಲರನ್ನೂ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ.

ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ಬಂದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.ಎದುರಿಗೆ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Join Whatsapp