Home ಕರಾವಳಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ರವರಿಗೆ ಕೋವಿಡ್ ಪಾಸಿಟಿವ್

ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ರವರಿಗೆ ಕೋವಿಡ್ ಪಾಸಿಟಿವ್

ಮಂಗಳೂರು: ಮಾಜಿ ಸಚಿವ, ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ರವರಿಗೆ ಕೋವಿಡ್ ದೃಢಪಟ್ಟಿದ್ದು, ಮೂರು ದಿನಗಳ ಕಾಲ ತಮ್ಮ  ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು  ರದ್ದುಪಡಿಸಿದ್ದಾರೆ.

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ ಆರ್ಟಿಪಿಸಿಆರ್ ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ಇದರಿಂದಾಗಿ ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ರವರಿಗೆ RTPCR  ಪರೀಕ್ಷೆಗೆ ಒಳಪಡಿಸಿದ್ದರು. ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದ್ದು ವೈದ್ಯರ ಸಲಹೆಯಂತೆ  3 ದಿನಗಳ ಕ್ವಾರಂಟೈನ್ ಆಗಲಿದ್ದಾರೆ. ಆದ್ದರಿಂದ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ  ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು,ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Join Whatsapp
Exit mobile version