Home ಕರಾವಳಿ ಒಂದು ಪಕ್ಷದ ಪರ ಪ್ರಚಾರ ಮಾಡಿ ಕರ್ತವ್ಯ ಲೋಪ| ಪಿಡಿಒ ಅಮಾನತು

ಒಂದು ಪಕ್ಷದ ಪರ ಪ್ರಚಾರ ಮಾಡಿ ಕರ್ತವ್ಯ ಲೋಪ| ಪಿಡಿಒ ಅಮಾನತು

ಮಂಗಳೂರು: ಹರೇಕಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ ಬೆಳ್ಚಡ ಸರ್ಕಾರಿ ನೌಕರ. ಅವರು ಒಂದು ಪಕ್ಷದ ಪರ ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ ಎಂಬ ದೂರಿನನ್ವಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ವಿಚಾರಣಾ ವರದಿಯ ನಂತರ ಆ ಸರ್ಕಾರಿ ನೌಕರನನ್ನು ಕರ್ತವ್ಯ ಲೋಪದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

ಅಮಾನತ್ತಾದ ಅವಧಿಯಲ್ಲಿ ನೌಕರರಿಗೆ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ನಿಯಮ 98ರ ನಿಯಮ ಲಭ್ಯವಾಗುವ ಜೀವನಾಧಾರ ಭತ್ಯೆಯನ್ನು ಪಾವತಿಸಲು ಆದೇಶಿಸಲಾಗಿದೆ.

ಅಲ್ಲದೆ ಅಮಾನತ್ತಿನಲ್ಲಿರುವ ಅವಧಿಯಲ್ಲಿ ನೌಕರ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ನಿಯಮ 104ರ ಅನ್ವಯ ಸಂಬಂಧಪಟ್ಟ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Join Whatsapp
Exit mobile version