ಸಿದ್ದರಾಮಯ್ಯ ಕುಟುಂಬವನ್ನು ಅವಹೇಳನ ಮಾಡಿದ್ದ ಬಿಜೆಪಿ ಕಾರ್ಯಕರ್ತೆಗೆ ಸ್ಟೇಷನ್ ಜಾಮೀನು

Prasthutha|

ಬೆಂಗಳೂರು: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ.  

- Advertisement -

ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ.  

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?” ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹನುಮಂತರಾಯ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಜು.27ರಂದು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.

- Advertisement -

ಶಕುಂತಲಾ ನಟರಾಜ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಸ್ವೇಷನ್ ಜಾಮೀನಿನ ಮೇಲೆ ಮನೆಗೆ ಕಳುಹಿಸಿದ್ದಾರೆ.

‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು. ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ಠಾಣೆಯಲ್ಲಿ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.



Join Whatsapp