Home ಟಾಪ್ ಸುದ್ದಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಅವಹೇಳನ; ಆರೋಪಿಯ ಬಂಧನ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಹೇಳನ; ಆರೋಪಿಯ ಬಂಧನ

ಚಿಕ್ಕಮಗಳೂರು: ಅಂಬೇಡ್ಕರ್ ಭಾವಚಿತ್ರ ಹಾಗೂ ಸಕಲೇಶಪುರದ ದಲಿತ ಸಂಘಟನೆಗಳ ಪ್ರತಿಭಟನೆಯ ಫೋಟೋಗಳನ್ನು ಬಳಸಿ ಅಶ್ಲೀಲ ಹಾಡಿನ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.


ಆರೋಪಿಯನ್ನು ಬೆಂಗಳೂರು ಮೂಲದ ರಂಜಿತ್ ಎಂದು ಗುರುತಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.


ಇತ್ತೀಚೆಗೆ ಸಕಲೇಶಪುರದಲ್ಲಿ ಗೋಸಾಗಣೆ ಮಾಡುತ್ತಿದ್ದ ದಲಿತ ವ್ಯಕ್ತಿಗೆ ಹಲ್ಲೆ ಮಾಡಿದ್ದ ಬಜರಂಗದಳದ ಕಾರ್ಯಕರ್ತರ ವಿರುದ್ಧ ಸಕಲೇಶಪುರದಲ್ಲಿ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆಯ ಕೆಲವು ಫೋಟೋಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಬಳಸಿ ಹಿನ್ನೆಲೆಯಲ್ಲಿ ಅಶ್ಲೀಲ ಹಾಡಿನ ವಿಡಿಯೋ ಸೃಷ್ಟಿಸಿ ಅದನ್ನು ಸಿಕೆಎಂ ಪವರ್ ಆಫ್ ಹಿಂದೂ ಎಂಬ ಇನ್ಸ್ಟಾಿಗ್ರಾಮ್ ಗ್ರೂಪ್ನಿಲ್ಲಿ ಶೇರ್ ಮಾಡಲಾಗಿತ್ತು.


ಈ ವಿಡಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಚಿಕ್ಕಮಗಳೂರು ಜಿಲ್ಲಾ ದಲಿತಪರ ಸಂಘಟನೆಗಳ ಮುಖಂಡರು ಅಂಬೇಡ್ಕರ್ ಭಾವಚಿತ್ರ ಹಾಗೂ ದಲಿತ ಹೋರಾಟಗಾರರನ್ನು ಅವಮಾನಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಎಸ್ಪಿ ಉಮಾಪ್ರಶಾಂತ್ ಅವರಿಗೆ ದೂರು ನೀಡಿದ್ದರು. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

Join Whatsapp
Exit mobile version