Home ಟಾಪ್ ಸುದ್ದಿಗಳು ಸಚಿವ ಝಮೀರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

ಸಚಿವ ಝಮೀರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

ಸಚಿವ ಝಮೀರ್‌ ಅಹಮದ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ.

ಝಮೀರ್‌ ಅಹಮದ್‌ ಖಾನ್‌ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್‌ ಮಾಡಿದ್ದ ಪುನೀತ್‌ ಕೆರೆಹಳ್ಳಿ ಬೇಕಾಬಿಟ್ಟಿ ಮಾತನಾಡಿದ್ದರು. ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್‌. ಝಮೀರ್‌ ಅವರ ಬಗ್ಗೆ ಏ ಜಮೀರ್ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಝಮೀರ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಸಚಿವ ಝಮೀರ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.

Join Whatsapp
Exit mobile version