ಮಡಿಕೇರಿ: ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದೇವ ಕಾಡು” ಸಿನಿಮಾ ಪ್ರದರ್ಶನ

Prasthutha|

ಮಡಿಕೇರಿ: ಬೆಂಗಳೂರಿನಲ್ಲಿ ನಡೆಯುತ್ತಿರುವ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಡವ ಭಾಷೆಯ ಚಿತ್ರ ಪ್ರದರ್ಶನಗೊಳ್ಳಲಿದೆ.

- Advertisement -

ಮಾರ್ಚ್ 6 ರಂದು ಚಾಮರಾಜಪೇಟೆಯ ಡಾ. ರಾಜ್ ಕುಮಾರ್ ಭವನದಲ್ಲಿ ಸಂಜೆ 4 ಗಂಟೆಗೆ ಪ್ರದರ್ಶನಗೊಳ್ಳಲಿದ್ದು, ನಿರ್ದೇಶಕ ಎಲ್, ಅಮರ್ ದೇವ ಕಾಡು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಎರಡು ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಖ್ಯಾತ ನಿರ್ಮಾಪಕ ಅವಿನಾಶ್ ಶೆಟ್ಟಿ ನೇತೃತ್ವದಲ್ಲಿ ಚಿತ್ರ ನಿರ್ಮಾಗೊಂಡಿದೆ ಇನ್ನೂ ಕೊಡಗಿನ ಕಲಾವಿದರಾದ ಅಲ್ಲಾರಂಡ ವಿಠಲ ನಂಜಪ್ಪ ಹಾಗೂ ತಾತಂಡ ಪ್ರಭಾ ನಾಣಯ್ಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.



Join Whatsapp