ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್ ರಿಂದ “ರಾಷ್ಟ್ರ ಧ್ವಜಾರೋಹಣ”

Prasthutha|

ಬೆಂಗಳೂರು: ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ “76ನೇ ಸ್ವಾತಂತ್ರ್ಯೋತ್ಸವ” ಅದ್ಧೂರಿ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.

- Advertisement -

  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ  ಸದಸ್ಯರಾದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎ.ರವಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ. ಎಲ್.ಎನ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷರಾದ ಗೋಪಮ್ಮ, ಉಪಾಧ್ಯಕ್ಷರಾದ ಗೀತಾ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Join Whatsapp
Exit mobile version