ದೇವನಹಳ್ಳಿ ಹೋರಾಟ: ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

- Advertisement -

ಮೈಸೂರು: ಬೆಂಗಳೂರಿನ ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದರು.

- Advertisement -

ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್ ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

ಕಾರಿಡಾರ್ ಗೆ ಕೇವಲ 100 ಎಕರೆ ಬಳಸಿ ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಅಲ್ಲಿ ನಮ್ಮ ರೈತರು ಕೂಲಿಯಾಳು ಗಳಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

- Advertisement -

ಸರ್ಕಾರ ಯಾರೋ‌ ಮೂವರು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಮಾಡುತ್ತಿದೆ.‌ ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ. ಹಸಿರು ವಲಯ ಮಾಡುತ್ತೇವೆ ಎಂಬ ನಾಟಕ ಆಡಿ ಜನರನ್ನು ಹೆದರಿಸುತ್ತಿದೆ. ನಿಮ್ಮ ನಾಟಕ‌ ನಮ್ಮೆಲ್ಲರ ಕಣ್ಣಿಗೆ ಕಾಣಿಸುತ್ತಿದೆ. 15 ರಂದು ರೈತ ಪರ ನಿರ್ಧಾರ ಪ್ರಕಟಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.

- Advertisement -


Must Read

Related Articles