ದೇವನಹಳ್ಳಿ ಬಾಲಕಿ ಅತ್ಯಾಚಾರ ಪ್ರಕರಣ | ಫಾಸ್ಟ್ ಟ್ರಾಕ್ ಕೋರ್ಟ್ ಮೂಲಕ ತ್ವರಿತ ವಿಚಾರಣೆ ನಡೆಯಲಿ : ವಿಮೆನ್ಸ್ ಫ್ರಂಟ್ ಆಗ್ರಹ

Prasthutha: November 27, 2020

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿ 8 ರ ಹರೆಯದ ಮುಸ್ಲಿಂ ಬಾಲಕಿಯನ್ನು ದೇವಸ್ಥಾನವೊಂದರ ಅರ್ಚಕನೋರ್ವ ನಡೆಸಿದ ಅತ್ಯಾಚಾರವನ್ನು ನ್ಯಾಷನಲ್ ವಿಮೆನ್ಸ್ ಫ್ರಂಟ್ ತೀವ್ರವಾಗಿ ಖಂಡಿಸಿದೆ.

ಘಟನೆಯು ಕಥುವಾದ ಆಸಿಫಾ ಪ್ರಕರಣವನ್ನು ನೆನಪಿಸುತ್ತಿದ್ದು, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ದೇವಸ್ಥಾನದ ಅಂಗಳದಲ್ಲಿ ಆಟವಾಡುತ್ತಿದ್ದ 8ರ ಬಾಲೆಯನ್ನು ಅರ್ಚಕ  ಅತ್ಯಾಚಾರ ಮಾಡಿರುವುದು ಅತ್ಯಂತ  ಹೇಯ ಕೃತ್ಯವಾಗಿದೆ ಎಂದು ರಾಜ್ಯ ಕಾರ್ಯದರ್ಶಿ ತಬಸ್ಸುಮ್ ಅರಾ ಅಭಿಪ್ರಾಯ ಪಟ್ಟಿದ್ದಾರೆ.

ಯುಪಿಯ ಹಥ್ರಾಸ್, ಬಹ್ರಾನ್ ಪುರ್, ಬಿಹಾರದ ಗುಲ್ನಾಝ್ ಮೇಲೆ ನಡೆದಂತಹ ಘಟನೆಗಳು ಈಗ ರಾಜ್ಯ ರಾಜಧಾನಿಯಲ್ಲೂ ನಡೆಯುತ್ತಿರುವುದು ದುರದೃಷ್ಟಕರ. ಈ ಬಗ್ಗೆ ಪೊಲೀಸರು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತೆ ಮತ್ತೆ ಇಂತಹ ಪ್ರಕರಣಗಳು ಮರುಕಳಿಸಲು ಯಾರು ಕಾರಣ? ಸರಕಾರ ಆರೋಪಿಯ ಪರ ವಹಿಸದೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಣ್ಮಕ್ಕಳನ್ನು ರಕ್ಷಿಸುವವರು ಯಾರು? ಈ ವಿಷಯದಲ್ಲಿ ಸರಕಾರದ ಮೌನ  ಮುರಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೋವಿಡ್ ಸಮಯದಲ್ಲೂ ಅನಗತ್ಯವಾಗಿದ್ದ ಹಲವಾರು ವಿಷಯಗಳಲ್ಲಿ ಸುಗ್ರೀವಾಜ್ಞೆಗಳ ಮೂಲಕ ಕಾನೂನು ಜಾರಿಗೆ ತರುವ ಕೇಂದ್ರ ಸರಕಾರ, ಅತ್ಯಾಚಾರಿಗಳ ವಿರುದ್ಧ ಕಠಿಣ ಶಿಕ್ಷೆ ಜಾರಿಗೆ ತರುವುದರ ಕುರಿತು ಯೋಚಿಸದೇ ಇರುವುದು ಕಳವಳಕಾರಿ ಎಂದು ಅವರು ಹೇಳಿದ್ದಾರೆ.

ದೇವನಹಳ್ಳಿ ಪ್ರಕರಣವನ್ನು ಕೂಡಲೇ ಉನ್ನತ ಮಟ್ಟದ ತನಿಖೆಗೊಳಪಡಿಸಬೇಕಾಗಿದೆ. ಅಲ್ಲದೆ, ಪ್ರಕರಣದ ಶೀಘ್ರ ವಿಲೇವಾರಿಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ ಗೆ ಈ ಪ್ರಕರಣವನ್ನು ವರ್ಗಾಯಿಸಿ, ಆರೋಪಿಗೆ ಕಠಿಣ ಶಿಕ್ಷೆ ದೊರೆಯುವಂತಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!