ದೇವರಾಜೇಗೌಡ ತಲೆಕೆಟ್ಟವನು: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಎಸ್ ಐಟಿ ವಶದಲ್ಲಿರುವ ಬಿಜೆಪಿ ಮುಂಖಡ, ವಕೀಲ ದೇವರಾಜೇಗೌಡ ಶುಕ್ರವಾರ ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ದೇವರಾಜೇಗೌಡ ಜತೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದಿದ್ದಾರೆ.

Join Whatsapp