ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಖಂಡಿಸಿದ ದೇವೇಗೌಡ

Prasthutha|

ನವದೆಹಲಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಪ್ರತಿಭಟನೆ ವೇಳೆ ಕೇಸರಿ ಶಾಲು ಧರಿಸಿದಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಖಂಡಿಸಿದ್ದಾರೆ.

- Advertisement -

ಈ ಬಗ್ಗೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ದೇವೇಗೌಡ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.


ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಹೇಳಿದ್ದಾರೆ.



Join Whatsapp