Home ಟಾಪ್ ಸುದ್ದಿಗಳು BJP ನಾಯಕರ ಭೇಟಿ: ನಾಳೆ NDA ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಸಾಧ್ಯತೆ

BJP ನಾಯಕರ ಭೇಟಿ: ನಾಳೆ NDA ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಸಾಧ್ಯತೆ

ಹೊಸದಿಲ್ಲಿ : ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಗುರುವಾರ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದರು.

2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕುರಿತು ಮಹತ್ವದ ನಿರ್ಣಾಯಕ ಸಭೆ ನಡೆಸಿ ಸೀಟು ಹಂಚಿಕೆ ಸೂತ್ರಗಳ ಬಗ್ಗೆ ನಾಯಕರು ಚರ್ಚೆ ನಡೆಸಿರುವ ಬಗ್ಗೆ ವರದಿಯಾಗಿದೆ.

ದೇವೇಗೌಡ ಮತ್ತು ಕುಮಾರಸ್ವಾಮಿ ನಾಳೆ (ಶುಕ್ರವಾರ) ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಕುರಿತು ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Join Whatsapp
Exit mobile version