ಪ್ರಜ್ವಲ್ ನನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

Prasthutha|

ಯಾದಗಿರಿ: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

- Advertisement -


ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾದ ವೇಳೆ ಮಾತನಾಡಿದ ಅವರು, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಬಂಧ ಇಲ್ಲ ಎಂದರು. ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.



Join Whatsapp