ಕಲಬುರಗಿ: ಪುಟಗೋಸಿ ವಿಪಕ್ಷ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದರು ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವೇಗೌಡರು ವಿಪಕ್ಷ ನಾಯಕನಾಗಿದ್ದರು ಹಾಗಾದರೆ ಅದುಕೂಡ ಪುಟಗೋಸಿನಾ? ಎಂದು ಪ್ರಶ್ನಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ನನ್ನ ಕಂಡರೆ ಕುಮಾರಸ್ವಾಮಿಗೆ ಭಯ. ಸಿಎಂ ಆಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕು. ಸಾಂವಿಧಾನಿಕ ಹುದ್ದೆ ಬಗ್ಗೆ ಲಘುವಾಗಿ ಮಾತನಾಡಬಾರದು. ಎಚ್.ಡಿ.ಕುಮಾರಸ್ವಾಮಿ ವೈಯಕ್ತಿಕವಾಗಿ ಮಾತಾಡಬಾರದು ಅಂತ ಕಲಬುರಗಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.