ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ : ದೇವೇಗೌಡ ಆಕ್ರೋಶ

Prasthutha|

ಹಣಕಾಸು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಅನ್ಯಾಯ ಆಗಿದೆ. ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ. ಆದರೆ ಕರ್ನಾಟಕಕ್ಕೆ ಕಡಿಮೆ ಹಣ ಬಿಡುಗಡೆ ಮಾಡಿರುವುದರಿಂದ ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು,  ನನ್ನ ಅವಧಿಯಲ್ಲಿ ಬೆಂಗಳೂರಿಗೆ, ರಾಜ್ಯಕ್ಕೆ ಏನು ಕೆಲಸ ಆಗಿದೆ. ಕುಮಾರಸ್ವಾಮಿ ಕಾಲದಲ್ಲಿ ಏನಾಗಿದೆ ಅಂತ ಮನೆ ಮನೆಗೂ ತಲುಪಿಸುವ ಕೆಲಸ ಆಗಬೇಕು. ಎಲ್ಲಾ ವಾರ್ಡ್ ಗಳ ಮುಖಂಡರನ್ನು ಭೇಟಿ ಮಾಡಿ ಚುನಾವಣೆ ಬರೋ ಮುಂಚೆ ಎಲ್ಲಾ ವಾರ್ಡ್ ನಲ್ಲಿ ಸಭೆ ಮಾಡುತ್ತೇವೆ ಎಂದಿದ್ದಾರೆ.

ಕೊರೊನಾ ವಿಚಾರದಲ್ಲಿ ಪ್ರಧಾನಿ‌ ಮೋದಿ, ಹಾಗೂ ನಮ್ಮ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೀನಿ ನಾನು 12 ಸಲಹೆಗಳನ್ನ ಕೊಟ್ಟಿದ್ದೆ ಅದರಲ್ಲಿ ಕೆಲವು ಸಲಹೆಗಳನ್ನ ಕಾರ್ಯಗತ ಮಾಡುತ್ತಿದ್ದಾರೆ. ಮೊದಲ ಅಲೆಯಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ ಅಂತ ಮೋದಿಯನ್ನ  ಎಲ್ಲರೂ ಹೊಗಳಿದ್ದರು. ಎರಡನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚಳ ಆಗಿದೆ ಜೊತೆಗೆ ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಬಗ್ಗೆ ಆತಂಕ ಹುಟ್ಟುಕೊಂಡಿದೆ ದೇಶ ವಿದೇಶಗಳ ಎಕ್ಸ್ ಪರ್ಟ್ ಗಳು ಇದರ ಬಗ್ಗೆ ಮಾತನಾಡುತ್ತಿದ್ದಾರೆ‌ ಎಂದಿದ್ದಾರೆ.

- Advertisement -

ನನ್ನ ಜೀವಿತಾವಧಿಯಲ್ಲಿ ಇಂತಹ ದೊಡ್ಡ ಸಾಂಕ್ರಾಮಿಕ ರೋಗ ನೋಡಿಲ್ಲ ಇದರಿಂದ ದೇಶದ ಜನ ಸಮಸ್ಯೆಗೆ ಸಿಲುಕಿದ್ದಾರೆ. ರೆಮಿಡಿಸ್ವೀರ್, ಲಸಿಕೆ ಕಳ್ಳದಾರಿಯಲ್ಲಿ ಮಾರಾಟ ಮಾಡ್ತಿದ್ದಾರೆ ಈಗಾಗಲೇ ಅನೇಕ ಜನರನ್ನು ಬಂಧನ ಮಾಡಿದ್ದಾರೆ ಆಡಳಿತದಲ್ಲಿ ಕೆಲ ಲೋಪಗಳು ಇರಬಹುದು. ಇದನ್ನು ಸರಿ ಮಾಡೋ ಕೆಲಸ ಸರ್ಕಾರ ತಕ್ಷಣ ಮಾಡಬೇಕು‌ ಎಂದು ದೇವೇಗೌಡ ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ಕುಮಾರಸ್ವಾಮಿ ಒಂದು ತಿಂಗಳ ಮುಂಚೆಯೇ  ಸಲಹೆ ಕೊಟ್ಟಿದ್ದರು ಆದರೆ ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಹಳ್ಳಿಗಳಲ್ಲೂ ಸೋಂಕು ಹೆಚ್ಚುತ್ತಿದೆ ಆಗಾಗಿ ಇನ್ನು ಹೆಚ್ಚಿನ  ಕಠಿಣ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದರು.

ಹಣಕಾಸು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಅನ್ಯಾಯ ಆಗಿದೆ. ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ. ಆದರೆ ಕರ್ನಾಟಕಕ್ಕೆ ಕಡಿಮೆ ಹಣ ಬಿಡುಗಡೆ ಮಾಡಿರುವುದರಿಂದ ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp