ಹುಣಸೂರು: ಶೋಷಿತರ ಕುರಿತು ಚರ್ಚಿಸಬೇಕಾದ ಸದನದಲ್ಲಿ ಹಿಜಾಬ್, ಹಲಾಲ್ ಕಟ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ. ಹೆಚ್. ವಿಶ್ವನಾಥ್ ಹೇಳಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ 115 ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೋಷಿತ ಸಮುದಾಯಗಳ ಅಭಿವೃದ್ದಿಗಾಗಿ ಸಿದ್ದರಾಮಯ್ಯ 28 .5 ಸಾವಿರ ಕೋಟಿ ನೀಡಿದ್ದರು. ಜೊತೆಗೆ ಆ ವರ್ಗದ ಜನರೇ ಗುತ್ತಿಗೆ ನಿರ್ವಹಿಸಲು ಅವಕಾಶವನ್ನೂ ಕಲ್ಪಿಸಿದ್ದರು. ಬೊಮ್ಮಾಯಿಯವರು 28 ಸಾವಿರ ಕೋಟಿ ಘೋಷಿಸಿದ್ದಾರೆ. ಆದರೆ ಯಾರ ಉದ್ದಾರವಾಗಿದೆ. ಶೋಷಿತರ ಬದಲಿಗೆ ಉಳ್ಳವರ ಅಭಿವೃದ್ದಿಯಾಗುತ್ತಿದೆ ಎಂದು ಹೇಳಿದರು.
ಈ ಬಗ್ಗೆ ಚರ್ಚೆಯಾಗಬೇಕಾದ ಸದನದಲ್ಲಿ ಹಲಾಲ್ ಕಟ್, ಮೈಕ್ ಸೆಟ್ ,ಹಿಜಾಬ್ ಕುರಿತು ಚರ್ಚೆ ಮಾಡುತ್ತಿದ್ದಾರೆ. ಶೋಷಿತ ಸಮುದಾಯದ ಶಾಸಕರು ಸಹ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.