Home ಟಾಪ್ ಸುದ್ದಿಗಳು ಉಚಿತ ಭಾಗ್ಯದ ಮುಂದೆ ಅಭಿವೃದ್ಧಿ ಕೆಲಸ ಕೊಚ್ಚಿಕೊಂಡು ಹೋಯಿತು: ಸೋಲಿನ ಬಳಿಕ ಮಾಧುಸ್ವಾಮಿ ಮೊದಲ ಪ್ರತಿಕ್ರಿಯೆ

ಉಚಿತ ಭಾಗ್ಯದ ಮುಂದೆ ಅಭಿವೃದ್ಧಿ ಕೆಲಸ ಕೊಚ್ಚಿಕೊಂಡು ಹೋಯಿತು: ಸೋಲಿನ ಬಳಿಕ ಮಾಧುಸ್ವಾಮಿ ಮೊದಲ ಪ್ರತಿಕ್ರಿಯೆ

ತುಮಕೂರು: ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ, ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಚಿಕ್ಕನಾಯಕನಹಳ್ಳಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾಡಿದ ಮಾಧುಸ್ವಾಮಿ, ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದರು.

ಉಚಿತ ಭಾಗ್ಯ ಮುಂದುವರಿದರೆ ಚುನಾವಣೆ ಮಾಡುವುದು ತುಂಬಾ ಕಷ್ಟವಾಗುತ್ತೆ. ರಾಜ್ಯದ ತೆರಿಗೆದಾರರ ದುಡ್ಡು ಇಷ್ಟಬಂದ ಹಾಗೇ ಹಂಚುತ್ತೇನೆ ಅಂದರೇ ಮನೆಯಲ್ಲಿ ಕೂತವರಿಗೆ ಹಂಚುತ್ತೇನೆ ಅಂದ್ರೆ ರಾಜ್ಯದ ಪರಿಸ್ಥಿತಿ ಏನಾಗಬೇಡ. ಕಾಂಗ್ರೆಸ್ ಮಾಡಿದ ಪಾಪಕ್ಕೆ ಮೋದಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Join Whatsapp
Exit mobile version