ಕೇರಳ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ಗೆಲುವು

Prasthutha|

ತಿರುವನಂತಪುರ: ಎರ್ನಾಕುಲಂ ಜಿಲ್ಲೆಯ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ಗೆಲುವು ಸಾಧಿಸಿದ್ದಾರೆ.
ಉಮಾ ಥಾಮಸ್ ತನ್ನ ಸಮೀಪದ ಪ್ರತಿಸ್ಪರ್ಧಿ ಎಲ್ ಡಿಎಫ್ ಅಭ್ಯರ್ಥಿ ಡಾ.ಜೋ ಜೋಸೆಫ್ ಅವರನ್ನು 22,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದರು.
ಕಾಂಗ್ರೆಸ್ ಶಾಸಕ ಪಿ.ಟಿ. ಥಾಮಸ್ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ದಿವಂಗತ ಶಾಸಕರ ಪತ್ನಿ ಉಮಾ ಥಾಮಸ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು.

Join Whatsapp