ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ: ದೇವೇಂದ್ರ ಫಡ್ನವೀಸ್ ಪೊಲೀಸ್ ವಶಕ್ಕೆ

Prasthutha|

ಮುಂಬೈ: ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಒತಾಯಿಸಿ ಮುಂಬೈನ ಆಜಾದ್ ಮೈದಾನದಲ್ಲಿ ಬಿಜೆಪಿ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಫಡ್ನವೀಸ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಂಬೈ ಪೊಲೀಸರು ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಜತೆ ಆಸ್ತಿ ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದ ಫಡ್ನವೀಸ್, ಈ ಬಗ್ಗೆ ಹಲವು ದಾಖಲೆಗಳನ್ನು ಬಿಡುಗಡೆ ಮಾಡಿ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದರು. ಬಳಿಕ ಸಚಿವ ನವಾಬ್ ಮಲಿಕ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಜೈಲಿನಲ್ಲಿರುವ ಮಲಿಕ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.



Join Whatsapp